ನವದೆಹಲಿ:ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಹಾರಾಟ ರದ್ದುಗೊಳಿಸಿ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟವಿಲ್ಲ
ದೇಶಾದ್ಯಂತ ಕೊರೊನಾ ಅಬ್ಬರ ಜೋರಾಗಿರುವ ಕಾರಣ ಇದೀಗ ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ರದ್ಧುಗೊಳಿಸಲಾಗಿದೆ.
International flights
ಈ ಹಿಂದೆ ಜುಲೈ 31ರವರೆಗೆ ನಿರ್ಬಂಧಿಸಿ ಆದೇಶಿಸಲಾಗಿತ್ತು. ದೇಶದಲ್ಲಿ ಈಗಲೂ ಕೊರೊನಾ ಆರ್ಭಟ ಜೋರಾಗಿರುವ ಕಾರಣ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಈ ಸುತ್ತೋಲೆ ಹೊರಡಿಸಿದೆ. ಇದರ ಮಧ್ಯೆ ಕಾರ್ಗೋ (ಸರಕು ಮತ್ತು ಸೇವೆ) ಹಾಗೂ ವಾಣಿಜ್ಯ ಸೇವೆಗಳ ವಿಮಾನಗಳ ಹಾರಾಟದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ತಿಳಿಸಿದೆ.
ಈಗಾಗಲೇ ವಿವಿಧ ದೇಶಗಳಿಂದ ವಂದೇ ಭಾರತ್ ಮಿಷನ್ ಯೋಜನೆಯಡಿ ಏರ್ ಇಂಡಿಯಾ ಹಾಗೂ ಕೆಲವು ಖಾಸಗಿ ವಿಮಾನಗಳು ಹಾರಾಟ ನಡೆಸುತ್ತಿವೆ. ದೇಶದೊಳಗೆ ವಿಮಾನಯಾನ ಸೇವೆ ಆರಂಭಗೊಂಡಿದ್ದು, ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ.