ನವದೆಹಲಿ:ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ, ಆಕ್ರೋಶ ಜೋರಾಗಿದೆ. ಇನ್ನೊಂದೆಡೆ ಮುನ್ನೆಚ್ಚರಿಕಾ ಕ್ರಮವಾಗಿ ಅಸ್ಸೋಂನ 10 ಜಿಲ್ಲೆಗಳಲ್ಲಿ 24 ಗಂಟೆಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಅಸ್ಸೊಂನಲ್ಲಿ ಸೇನೆ ಸರ್ಪಗಾವಲು,10 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ - ಜಂತರ್ ಮಂತರ್‌ನಲ್ಲಿ ಪರಾಕಾಷ್ಠೆಗೊಂಡು ಪ್ರತಿಭಟನಾ ಪ್ರದರ್ಶನ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ (ಸಿಎಬಿ) ವಿರುದ್ಧ ಈಶಾನ್ಯದ ರಾಜ್ಯಗಳಲ್ಲಿ ಜನರು ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅಸ್ಸೋಂನ 1ಂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಅಸ್ಸಾಂನ 10 ಜಿಲ್ಲೆಗಳಲ್ಲಿ 24 ಗಂಟೆ ಇಂಟರ್ನೆಟ್ ಸೇವೆಗಳ ಸ್ಥಗಿತ...
ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ಮಸೂದೆಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಅಸ್ಸೋಂ ಮತ್ತು ತ್ರಿಪುರದಲ್ಲಿ ಅಸ್ಸೋಂ ರೈಫಲ್ಸ್‌ನ ತುಕಡಿಗಳನ್ನು ನಿಯೋಜಿಸಲಾಗಿದ್ದು, ಗುವಾಹಟಿಯಲ್ಲಿ ಕರ್ಫ್ಯೂ ಹೇರಲಾಗಿದೆ.
ತ್ರಿಪುರಾ ಮತ್ತು ಅಸ್ಸೋಂನಲ್ಲಿ ಅಸ್ಸೋಂ ರೈಫಲ್ಸ್‌ನ ಮೂರು ಸೇನಾ ತುಕಡಿ, ತ್ರಿಪುರದಲ್ಲಿ ಎರಡು ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.
ದೇಶದ ರಾಜಧಾನಿ ನವದೆಹಲಿಯ ಜಂತರ್ ಮಂತರ್‌ನಲ್ಲೂ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.