ನವದೆಹಲಿ:2007ರಲ್ಲಿ ಕೇಂದ್ರದ ಹಣಕಾಸು ಸಚಿವರಾಗಿದ್ದ ಪಿ ಚಿದಂಬರಂ ಅವರ ಮೇಲೆ ಕೇಳಿ ಬಂದಿರುವ ಐಎನ್‌ಎಕ್ಸ್ ಮೀಡಿಯಾ ಕೇಸ್ನಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರದಲ್ಲಿ ಅವರೇ ಕಿಂಗ್ಪಿನ್ ಎಂಬ ಆರೋಪ ಕೇಳಿಬಂದಿದ್ದು ಈ ಕಾರಣ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿ ಇದೀಗ ತಿರಸ್ಕೃತಗೊಂಡಿದೆ.
ಸದ್ಯ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಸದ್ಯ ಅವರು ಕಣ್ಮರೆಯಾಗಿದ್ದಾರೆ. ಜಾರಿ ನಿರ್ದೇಶನಾಲಯ ಹಾಗೂ ಐಟಿ ಅಧಿಕಾರಿಗಳು ಚಿದಂಬರಂ ಮನೆ ಮೇಲೆ ದಾಳಿ ಮಾಡಿದ್ದು, ಅವು ಅಲ್ಲಿಲ್ಲ ಎಂಬ ಮಾಹಿತಿ ಬಂದಿದೆ.
ತಲೆಮರೆಸಿಕೊಂಡಿರುವ ಚಿದಂಬರಂ ಅವರು ಮುಂದಿನ ಎರಡು ಗಂಟೆಗಳಲ್ಲಿ ಹಾಜರಾಗಬೇಕೆಂದು ಸಿಬಿಐ ಅಧಿಕಾರಿಗಳು ಅವರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.
ನಿರೀಕ್ಷಣಾ ಜಾಮೀನಿನ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಈ ಪ್ರಕರಣದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿರುವುದು ಮೆಲ್ನೋಟಕ್ಕೆ ಕಂಡುಬಂದಿರುವ ಕಾರಣ, ನಿರೀಕ್ಷಣಾ ಜಾಮೀನು ನೀಡುವುದು ಸಾಧ್ಯವಿಲ್ಲ ಎಂದು ತಿಳಿಸಿದೆ. ಹೀಗಾಗಿ ಕಾಂಗ್ರೆಸ್ನ ಮಾಜಿ ಸಚಿವ ಪಿ ಚಿದಂಬರಂ ಅವರಿಗೆ ಭಾರೀ ಹಿನ್ನಡೆಯಾಗಿದೆ.