ನವದೆಹಲಿ:ಐಎನ್ಎಕ್ಸ್ ಮಿಡಿಯಾ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿದ್ದ ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಸೆಪ್ಟೆಂಬರ್ 19ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪಿ.ಚಿದಂಬರಂ ಅವರನ್ನ ಏಷ್ಯಾದ ಅತಿ ದೊಡ್ಡ ಜೈಲು ಎಂದು ಕರೆಸಿಕೊಳ್ಳುವ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಚಿದು ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಯಾವುದೇ ಕಾರಣಕ್ಕೂ ನ್ಯಾಯಾಂಗ ಬಂಧನಕ್ಕೆ ನೀಡಬಾರದೆಂದು ವಾದ ಮಂಡಿಸಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ, ಚಿದಂಬರಂ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೆಂದು ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟೆಂಬರ್ 19ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.