ಕರ್ನಾಟಕ

karnataka

ETV Bharat / bharat

ಚಿದಂಬರಂ ಕೊರಳಿಗೆ ಐಎನ್​ಎಕ್ಸ್ ಉರುಳು: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​ - ಸುಪ್ರೀಕೋರ್ಟ್

ಬಹುಕೋಟಿ ಐಎನ್​ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ತಂಡ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ದೆಹಲಿ ಹೈಕೋರ್ಟ್‌ ಚಿದಂಬರಂ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ. ಇದೇ ವೇಳೆ ಸುಪ್ರೀಂಕೋರ್ಟ್ ಕೂಡಾ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ಚಿದು ಯಾವುದೇ ಕ್ಷಣದಲ್ಲೂ ಅರೆಸ್ಟ್ ಆಗುವ ಸಾಧ್ಯತೆ ದಟ್ಟವಾಗಿದೆ.

ಸಾಂದರ್ಭಿಕ ಚಿತ್ರ

By

Published : Aug 21, 2019, 7:53 PM IST

ನವದೆಹಲಿ:ಐಎನ್​​ಎಕ್ಸ್​ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳವಾರ ದೆಹೆಲಿ ಹೈಕೋರ್ಟ್​ ತಿರಸ್ಕರಿಸುತ್ತಿದ್ದಂತೆ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ತ್ವರಿತ ಜಾಮೀನು ಅರ್ಜಿಯ ವಿಚಾರಣೆಯೂ ಮುಂದೂಡಿಕೆಯಾಗಿದೆ.

ಬಹುಕೋಟಿ ಐಎನ್​ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ತಂಡ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ ಚಿದು ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ, ಜಾಮೀನು ಅರ್ಜಿಯ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಚಿದಂಬರಂ ಪರ ವಕೀಲರು ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದರು.

ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೋಯಿ ಅವರು ಚಿದಂಬರಂ ಅವರ ಪರ ವಕೀಲರಾದ ಕಪಿಲ್ ಸಿಬಲ್​ ಅವರಿಗೆ ತಿಳಿಸಿದ್ದಾರೆ.

ABOUT THE AUTHOR

...view details