ನವದೆಹಲಿ:ತಮ್ಮ ತಂದೆ ಮತ್ತು ಮನೆಯಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದಾಗಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್(ಐಒಎ)ನ ಅಧ್ಯಕ್ಷ ನರಿಂದರ್ ಬಾತ್ರಾ ಹೇಳಿದ್ದಾರೆ. ಜೊತೆಗೆ ದೆಹಲಿ ಮತ್ತು ಫರೀದಾಬಾದ್ನ ತಮ್ಮ ಕಚೇರಿಯ ಒಬ್ಬ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದಿದ್ದಾರೆ.
ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ನರಿಂದರ್ ಬಾತ್ರಾ ತಂದೆ ಸೇರಿ ನಾಲ್ವರಿಗೆ ಸೋಂಕು - ನರಿಂದರ್ ಬಾತ್ರಾ ತಂದೆಗೆ ಕೊರೊನಾ ಪಾಸಿಟಿವ್
ತಮ್ಮ ತಂದೆ ಮತ್ತು ನಾಲ್ವರು ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಶನ್(ಐಒಎ)ನ ಅಧ್ಯಕ್ಷ ನರಿಂದರ್ ಬಾತ್ರಾ ಹೇಳಿದ್ದಾರೆ.
ನನ್ನ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಮೇ 25ರಂದು ತಂದೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ, ಹೀಗಾಗಿ ಅವರನ್ನು ಬಾತ್ರಾ ಆಸ್ಪತ್ರೆಯ ಕೋವಿಡ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆಯ ಅಟೆಂಡರ್ಗಳಾಗಿದ್ದ ಇಬ್ಬರು ಸಿಬ್ಬಂದಿ ಮತ್ತು ಇಬ್ಬರು ಸೆಕ್ಯುರಿಟಿ ಗಾರ್ಡ್ಗಳಿಗೆ ಸೋಂಕು ದೃಢಪಟ್ಟಿದೆ ಎಂದು ಬಾತ್ರಾ ತಿಳಿಸಿದ್ದಾರೆ.
ನಮ್ಮ ಮನೆಯಲ್ಲಿ 5 ಮಂದಿ ಕುಟುಂಬ ಸದಸ್ಯರು ಮತ್ತು ಸಿಬ್ಬಂದಿ ಸೇರಿ ಒಟ್ಟು 13 ಮಂದಿ ಇದ್ದೇವೆ. ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ ಐವರನ್ನು ಹೊರತಪಡಿಸಿ ಎಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಬಾತ್ರಾ ಹೇಳಿದ್ದಾರೆ.