ಕೋಲ್ಕತ್ತಾ: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 9 ಮಂದಿಯನ್ನ ಬಂಧನ ಮಾಡುವಲ್ಲಿ ಕೋಲ್ಕತ್ತಾ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ ಬರೋಬ್ಬರಿ 1. 5ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.
ಐಪಿಎಲ್ ಬೆಟ್ಟಿಂಗ್: 9 ಮಂದಿ ಬಂಧನ, 1.5 ಲಕ್ಷ ರೂ. ವಶ - ಪಶ್ಚಿಮ ಬಂಗಾಳ ಸುದ್ದಿ
ಇಂಡಿಯನ್ ಪ್ರೀಮಿಯರ್ ಲೀಗ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 9 ಮಂದಿ ಆರೋಪಿಗಳ ಬಂಧನ ಮಾಡಲಾಗಿದೆ.

IPL betting gang busted
ನಗರದ ವಿವಿಧೆಡೆ ದಂಧೆ ನಡೆಸುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದ್ದು, ಇಷ್ಟೊಂದು ಜನರ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜತೆಗೆ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ 17 ಮೊಬೈಲ್ ಫೋನ್, 14 ಲಾಪ್ಟಾಪ್, 3 ಟಿವಿ ಹಾಗೂ ಒಂದು ಕಾರು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಹಣ ಕೂಡ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ತೆಲಂಗಾಣದ ಕರೀಂನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ 13 ಜನರ ಬಂಧನ ಮಾಡಲಾಗಿತ್ತು.