ನವದೆಹಲಿ:ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ದೆಹಲಿಯಲ್ಲಿರುವ ಅವರ ನಿವಾಸದಲ್ಲೇ ಬುಧವಾರ ರಾತ್ರಿ ಬಂಧಿಸಿದೆ. ಆದರೆ ಈ ಬಂಧನದ ಮೂಲಕ ಪ್ರಸ್ತುತ ಗೃಹ ಸಚಿವರಾಗಿರುವ ಅಮಿತ್ ಷಾ ಅವರು ಸೇಡು ತೀರಿಸಿಕೊಂಡರೆ ಎಂಬ ಪ್ರಶ್ನೆ ಮೂಡಿದೆ.
ಪಿ. ಚಿದಂಬರಂ ಬಂಧನದ ಹಿಂದಿದೆಯಾ ಅಮಿತ್ ಷಾ ಸೇಡು...!
ಪಿ. ಚಿದಂಬರಂ ಅವರನ್ನು ಸಿಬಿಐ ದೆಹಲಿಯಲ್ಲಿರುವ ಅವರ ನಿವಾಸದಲ್ಲೇ ನಿನ್ನೆ ರಾತ್ರಿ ಬಂಧಿಸಿದೆ. ಆದ್ರೆ ಈ ಬಂಧನದ ಮೂಲಕ ಪ್ರಸ್ತುತ ಗೃಹ ಸಚಿವರಾಗಿರುವ ಅಮಿತ್ ಶಾ ಸೇಡು ತೀರಿಸಿಕೊಂಡರೆ ಎಂಬ ಪ್ರಶ್ನೆ ಇದೀಗ ಮೂಡಿದೆ.
ಹೌದು 2010ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಪಿ. ಚಿದಂಬರಂ ಗೃಹಸಚಿವರಾಗಿದ್ದರು. ಈ ಸಂದರ್ಭದಲ್ಲೇ ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಷಾ ಅವರನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಈಗ ಪಿ. ಚಿದಂಬರಂ ಅವರನ್ನು ಬಂಧಿಸಲಾಗಿದೆ ಎಂಬ ಮಾತುಗಳು ಚರ್ಚೆಯಲ್ಲಿವೆ.
ಇನ್ನು ತಮ್ಮ ತಂದೆಯನ್ನು ಬಂಧಿಸಿರುವುದಕ್ಕೆ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಅವರು ಹೇಳಿದ್ದಾರೆ. ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸದ್ಯ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಚಿದಂಬರಂ ಅವರನ್ನು ಸಿಬಿಐನ ರೋಸ್ ಅವೆನ್ಯೂ ಕೋರ್ಟ್ಗೆ ಇಂದು ಹಾಜರುಪಡಿಸುವ ಸಾಧ್ಯತೆ ಇದೆ.