ನವದೆಹಲಿ: ಮಾಧ್ಯಮಗಳನ್ನು ನಿಯಂತ್ರಿಸುವ ಕಾರ್ಯ ಪ್ರಾರಂಭಿಸಲು ಉತ್ಸುಕರಾಗಿದ್ದರೆ ಮುಖ್ಯವಾಹಿನಿಯ ಮಾಧ್ಯಮಗಳ ಬದಲು ಮೊದಲು ಡಿಜಿಟಲ್ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.
ಮುಖ್ಯವಾಹಿನಿಯ ಮಾಧ್ಯಮವೊಂದರಲ್ಲಿ (ಎಲೆಕ್ಟ್ರಾನಿಕ್ ಅಥವಾ ಮುದ್ರಣ ಇರಲಿ), ಪ್ರಕಟಣೆ ಅಥವಾ ಪ್ರಸಾರವು ಒಂದು ಸಮಯದ ಕಾರ್ಯವಾಗಿದೆ. ಆದರೆ ಡಿಜಿಟಲ್ ಮಾಧ್ಯಮವು ವ್ಯಾಪಕ ಶ್ರೇಣಿಯ ಓದುಗರನ್ನು ತಲುಪುತ್ತದೆ ಮತ್ತು ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್‌ನಂತಹ ಹಲವಾರು ಎಲೆಕ್ಟ್ರಾನಿಕ್ ಅಪ್ಲಿಕೇಶನ್‌ಗಳಿಂದಾಗಿ ವೈರಲ್ ಆಗುವ ಸಾಮರ್ಥ್ಯವನ್ನು ಹೊಂದಿವೆ ಎಂದು ಸುಪ್ರೀಂಕೋರ್ಟ್‌ನಲ್ಲಿನ ಅಫಿಡವಿಟ್‌ನಲ್ಲಿ ಹೇಳಿದೆ.
ಗಂಭೀರ ಪರಿಣಾಮ ಮತ್ತು ಸಾಮರ್ಥ್ಯವನ್ನು ಪರಿಗಣಿಸಿ, ನ್ಯಾಯಾಲಯವು ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಿದರೆ ಎಲೆಕ್ಟ್ರಾನಿಕ್ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಚೌಕಟ್ಟು ಮತ್ತು ನ್ಯಾಯಾಂಗ ಘೋಷಣೆಗಳು ಈಗಾಗಲೇ ಅಸ್ತಿತ್ವದಲ್ಲಿವೆ. ಹಾಗಾಗಿ ಮೊದಲು ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಚೌಕಟ್ಟು ರೂಪಿಸಬೇಕು ಎಂದು ಖಾಸಗಿ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲಾಗಿದೆ.