ಕಿನ್ನೌರ್ (ಹಿಮಾಚಲ ಪ್ರದೇಶ): ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿದ್ದ ಜನರನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ರಕ್ಷಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಅಗ್ನಿ ಅವಘಡ: ಐಟಿಬಿಪಿ ಪೊಲೀಸರಿಂದ ಜನರ ರಕ್ಷಣೆ - ಐಟಿಬಿಪಿ ಪೊಲೀಸರಿಂದ ಜನರ ರಕ್ಷಣೆ
ಕಿನ್ನೌರ್ ಜಿಲ್ಲೆಯ ಪುರ್ಬಾನಿ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಮನೆಗಳು ಸುಟ್ಟು ಹೋಗಿವೆ ಎಂದು ಐಟಿಬಿಪಿ ತಿಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ಅಗ್ನಿ ಅವಘಡ
ಪುರ್ಬಾನಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 13 ಮನೆಗಳು ಸುಟ್ಟು ಹೋಗಿವೆ. ಅದರೂ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವಂತೆ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಪ್ರತಿ ಸಂತ್ರಸ್ತ ಕುಟುಂಬಕ್ಕೆ 10,000 ರೂ.ಗಳ ತಕ್ಷಣ ಪರಿಹಾರವನ್ನು ನೀಡಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.