ನವದೆಹಲಿ:ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆ ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಹರಿಯಾಣ ರಾಜ್ಯಗಳ ಚುನಾವಣೆ ಜೊತೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ನಲ್ಲಿ ಕಣಿವೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಾಧ್ಯತೆ..! - ಜಮ್ಮು ಮತ್ತು ಕಾಶ್ಮೀರ ಚುನಾವಣೆ
ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಯಲ್ಲೇ ಕಣಿವೆ ರಾಜ್ಯದಲ್ಲೂ ಎಲೆಕ್ಷನ್ ನಡೆಸುವ ಸಾಧ್ಯತೆ ಹೆಚ್ಚಾಗಿದೆ.
ಚುನಾವಣೆ
ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಹರಿಯಾಣ ರಾಜ್ಯಗಳ ಚುನಾವಣೆ ಅಕ್ಟೋಬರ್ನಲ್ಲಿ ನಡೆಯುವ ಸಾಧ್ಯತೆ ಇದ್ದು, ಸದ್ಯ ಈ ರಾಜ್ಯಗಳ ಜೊತೆಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ ಈ ವರ್ಷಾಂತ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯುವ ಬಗ್ಗೆ ಮಾಹಿತಿ ನೀಡಿದ್ದರು.