ನವದೆಹಲಿ: ಕೇಂದ್ರ ಸರ್ಕಾರ ನೂತನವಾಗಿ ರಚನೆ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದಿಂದ ಜಾರಿಗೆ ಬರಲಿವೆ ಎಂದು ಹೇಳಲಾಗುತ್ತಿದೆ.
ಕಳೆದ ವಾರವಷ್ಟೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ ಮಸೂದೆಗೆ ಸಂಸತ್ ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನ ರದ್ದುಗೊಳಿಸಲಾಗಿದೆ.