ಅವಂತಿಪೋರಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ - Jammu and Kashmir
ಪುಲ್ವಾಮ ಜಿಲ್ಲೆಯ ಅವಂತಿಪೋರಾದ ಟ್ರಾಲ್ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಅವಂತಿಪೋರಾ ಎನ್ಕೌಂಟರ್
ಇಂದು ಬೆಳಗ್ಗೆ ಅವಂತಿಪೋರಾದ ಟ್ರಾಲ್ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ಆರಂಭವಾಗಿತ್ತು. ಪೊಲೀಸರು ಹಾಗೂ ಸೇನಾ ಪಡೆ ಸಿಬ್ಬಂದಿಯ ಜಂಟಿ ಕಾರ್ಯಾಚರಣೆಯಲ್ಲಿ ಅಪರಿಚಿತ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಮೃತ ಉಗ್ರನ ಬಳಿ ಇದ್ದ ಶಸ್ತ್ರಾಸ್ತ್ರಗಳು ಹಾಗೂ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್ಕೌಂಟರ್ ಅಂತ್ಯವಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.