ಶ್ರೀನಗರ:ಶಿಕ್ಷಣವನ್ನು ಮಾನವ ಅಭಿವೃದ್ಧಿಯ ಮಾರ್ಗದರ್ಶಕ ಶಕ್ತಿಯೆಂದು ಹೇಳಿರುವ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಹೊಸ ಶಿಕ್ಷಣ ನೀತಿಯ ಮೂಲಕ ಕೇಂದ್ರಾಡಳಿತ ಪ್ರದೇಶವನ್ನು ಜ್ಞಾನ, ಉದ್ಯಮ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಯ ಕೇಂದ್ರವಾಗಿ ಮಾರ್ಪಡಿಸಲು ವಿಶ್ವವಿದ್ಯಾಲಯಗಳು ಮುಂದಾಗಬೇಕು ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಹೆಚ್ಡಿ ವಿದ್ಯಾರ್ಥಿಗಳ ಶಿಷ್ಯವೇತನ ಏರಿಸಲು ನಿರ್ಧಾರ - ಜಮ್ಮು ವಿಶ್ವವಿದ್ಯಾಲಯದ
ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ 2020ರ ಹೊಸ ಶಿಕ್ಷಣ ನೀತಿಯ ಮೂಲಕ ಬದಲಾವಣೆಗೆ ಮುಂದಾಗಬೇಕಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೀಜ್ ನಿನ್ಹಾ ಹೇಳಿದ್ದಾರೆ. ಅಲ್ಲದೆ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನ 5 ಸಾವಿರದಿಂದ 10 ಸಾವಿರಕ್ಕೆ ಏರಿಸಲಾಗಿದೆ.
ಜಮ್ಮು ವಿಶ್ವವಿದ್ಯಾಲಯದ ಕುಲಪತಿಯಾಗಿರುವ ಸಿನ್ಹಾ, ಇಲ್ಲಿನ ರಾಜಭವನದಲ್ಲಿ ನಡೆದ ವಿಶ್ವವಿದ್ಯಾಲಯ ಮಂಡಳಿಯ 86ನೇ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಮ್ಮು ವಿಶ್ವವಿದ್ಯಾಲಯದ ಕುಲಪತಿ ಸಿನ್ಹಾ ರಾಜ ಭವನದಲ್ಲಿ ನಡೆದ ಜಮ್ಮು ವಿಶ್ವವಿದ್ಯಾಲಯದ ಮಂಡಳಿಯ 86ನೇ ಸಭೆಯ ಅಧ್ಯಕ್ಷತೆ ವಹಿಸಿ ಈ ಮಾತುಗಳನ್ನಾಡಿದರು.
ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು (ಸ್ಟೈಫಂಡ್) 5 ಸಾವಿರದಿಂದ 10 ಸಾವಿರಕ್ಕೆ ಏರಿಸುವ ಕುರಿತು ನಿರ್ಧರಿಸಲಾಗಿದೆ. ಇದಲ್ಲದೆ ಸಭೆಯಲ್ಲಿ ವಿಶ್ವವಿದ್ಯಾಲಯದಲ್ಲಿ ರಿಸರ್ಚ್ ಕ್ಲಸ್ಟರ್ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇನ್ನು ಅಲ್ಲಿನ ಸ್ಥಳೀಯ ಭಾಷೆಯಾದ ಡೋಗ್ರಿಯನ್ನು ಜಮ್ಮು ವಿಶ್ವವಿದ್ಯಾಲಯದಲ್ಲಿ ಹಾಗೂ ಕಾಶ್ಮೀರಿ ಭಾಷೆಯನ್ನು ಕಾಶ್ಮೀರಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಉತ್ತೇಜನ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ನಿರ್ದೇಶನ ನೀಡಿದ್ದಾರೆ.