ನವದೆಹಲಿ:ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಆಗಸ್ಟ್ 27ರಿಂದ ರಷ್ಯಾದ ರಾಜಧಾನಿ ಮಾಸ್ಕೋಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.
ಮುಂದಿನ ತಿಂಗಳು ವ್ಲಾಡಿವೋಸ್ಟಾಕ್ನಲ್ಲಿ ನಡೆಯಲಿರುವ ಉಭಯ ದೇಶಗಳ 5ನೇ ಆರ್ಥಿಕ ಸಭೆ ಮತ್ತು 20ನೇ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಗೆ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮುನ್ನ ಪೂರ್ವಭಾವಿಯಾಗಿ ಇವರು ಪ್ರಯಾಣ ಬೆಳೆಸಲಿದ್ದಾರೆ.