ಶೋಪಿಯಾನ್:ಐತಿಹಾಸಿಕ ಕಾರ್ಗಿಲ್ ವಿಜಯ್ ದಿವಸ್ನ 20ನೇ ವರ್ಷಾಚರಣೆಯೆ ಮರುದಿನವೇ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಹತರಾಗಿದ್ದಾರೆ.
20ನೇ ಕಾರ್ಗಿಲ್ ವಿಜಯ್ ದಿವಸ್ ಮರುದಿನವೇ ಇಬ್ಬರು ಉಗ್ರರ ಹತ್ಯೆ -
ದಕ್ಷಿಣ ಕಾಶ್ಮೀರ ಭಾಗದ ಶೋಪಿಯಾನ್ ಜಿಲ್ಲೆಯ ಬೊನ್‌ಬಜಾರ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಯ ಯೋಧರ ಶೋಧ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಯತ್ತ ಗುಂಡಿನ ದಾಳಿ ನಡೆಸಿದರು.
ಭದ್ರತಾ ಪಡೆ
ದಕ್ಷಿಣ ಕಾಶ್ಮೀರ ಭಾಗದ ಶೋಪಿಯಾನ್ ಜಿಲ್ಲೆಯ ಬೊನ್‌ಬಜಾರ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಯ ಯೋಧರ ಶೋಧ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಯತ್ತ ಗುಂಡಿನ ದಾಳಿ ನಡೆಸಿದರು.
ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್ ಆಗಿ ಮಾರ್ಪಟ್ಟಿದೆ. ಪ್ರತಿ ದಾಳಿ ನಡೆಸಿದ ಭದ್ರತಾ ಪಡೆಯ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಭದ್ರತಾ ಪಡೆಯ ಓರ್ವ ಯೋಧ ಮೃತಪಟ್ಟಿದ್ದಾನೆ. ಎರಡೂ ಕಡೆಗಳಿಂದ ಗುಂಡಿನ ಚಕಮಕಿ ಮುಂದುವರಿದಿದ್ದು, ಇನ್ನಷ್ಟು ಮಾಹಿತಿಗಾಗಿ ಎದುರು ನೋಡಲಾಗುತ್ತಿದೆ.
Last Updated : Jul 27, 2019, 10:34 AM IST