ಶ್ರೀನಗರ: ಕಣಿವೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ.
ಶ್ರೀನಗರದಲ್ಲಿರುವ ನಾಗರಿಕ ಸಚಿವಾಲಯದ ಕಟ್ಟಡದ ಮೇಲೆ ಜಮ್ಮು ಮತ್ತು ಕಾಶ್ಮೀರದ ಧ್ವಜದ ಜೊತೆಗೆ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ಇಂದು ಕಂಡುಬಂದಿದೆ.

ಸೋಮವಾರ ಮೋದಿ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಣಯದಲ್ಲಿ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ ಮಹತ್ವದ ಹೆಜ್ಜೆ ಇಡಲಾಗಿದೆ. ಕೇಂದ್ರದ ನಡೆಗೆ ವ್ಯಾಪಕ ಬೆಂಬಲವೂ ವ್ಯಕ್ತವಾಗಿತ್ತು.
ಕೇಂದ್ರ ಸರ್ಕಾರ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿದೆ. ಜಮ್ಮು-ಕಾಶ್ಮೀರಕ್ಕೆ ವಿಧಾನಸಭೆ ಇರಲಿದ್ದು, ಲಡಾಖ್ನಲ್ಲಿ ವಿಧಾನಸಭೆ ಇರುವುದಿಲ್ಲ.