ಶ್ರೀನಗರ( ಜಮ್ಮುಮತ್ತು ಕಾಶ್ಮೀರ) : ರಾಂಬನ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
ರಾಂಬನ್ ಜಿಲ್ಲೆಯ ಹೆದ್ದಾರಿಯ ಉದ್ದಕ್ಕೂ ಭೂಕುಸಿತ ಸಂಭವಿಸಿದ್ದು, ಇದರಿಂದಾಗಿ ಹೆದ್ದಾರಿ ಬಂದ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿ ಬಂದ್ ಆದ ಕಾರಣ, 2 ಸಾವಿರಕ್ಕೂ ಹೆಚ್ಚು ವಾಹನಗಳು ಹೆದ್ದಾರಿಯಲ್ಲಿ ಸಿಲುಕಿಕೊಂಡಿವೆ ಎಂದು ಅವರು ಹೇಳಿದರು.