ಪಾಟ್ನಾ:ಬಿಹಾರದಲ್ಲಿ ಚುನಾವಣಾ ಅಬ್ಬರ ಜೋರಾಗಿದ್ದು, ವಿವಿಧ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದರ ಮಧ್ಯೆ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ಮೇಲೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿದ್ದಾನೆ.
ಬಿಹಾರದಲ್ಲಿ ಜನತಾದಳ ರಾಷ್ಟ್ರವಾದಿ ಅಭ್ಯರ್ಥಿ ಮೇಲೆ ಗುಂಡಿನ ದಾಳಿ,ಕೊಲೆ... ಆರೋಪಿಯನ್ನ ಹೊಡೆದು ಕೊಂದ್ರು! - ಅಭ್ಯರ್ಥಿ ನಾರಾಯಣ ಸಿಂಗ್ ಸುದ್ದಿ
ಬಿಹಾರದಲ್ಲಿ ಮೊದಲ ಹಂತದ ಮತದಾನ ನಡೆಯಲು ಕೇವಲ ಮೂರು ದಿನ ಬಾಕಿ ಉಳಿದಿದ್ದು, ಇದರ ಮಧ್ಯೆ ಜನತಾದಳ ರಾಷ್ಟ್ರವಾದಿ ಅಭ್ಯರ್ಥಿ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ.
ಹತ್ಸಾರ್ ಗ್ರಾಮದಲ್ಲಿ ಪ್ರಚಾರ ಸಭೆ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಅಭ್ಯರ್ಥಿ ನಾರಾಯಣ ಸಿಂಗ್ ಹಾಗೂ ಆತನ ಸಹಾಯಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.
ಇನ್ನು ದಾಳಿ ನಡೆಸಿದ ವ್ಯಕ್ತಿಯನ್ನ ಆಕ್ರೋಶಗೊಂಡ ಸ್ಥಳೀಯರು ಹೊಡೆದು ಸಾಯಿಸಿದ್ದಾರೆ ಎಂದು ವರದಿಯಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಎರಡು ಬೈಕ್ಗಳ ಮೇಲೆ ಬಂದ ನಾಲ್ವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಮೂವರು ಆರೋಪಿಗಳ ಬಂಧನ ಮಾಡಲಾಗಿದ್ದು, ಓರ್ವನನ್ನ ಹೊಡೆದು ಸಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ.