ಚಂಡೀಗಢ(ಹರಿಯಾಣ):ಉತ್ತರದ ರಾಜ್ಯಹರಿಯಾಣದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ. ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಕಿಂಗ್ ಮೇಕರ್ ಸ್ಥಾನದಲ್ಲಿರುವ ಜನನಾಯಕ ಜನತಾ ಪಾರ್ಟಿ(ಜೆಜೆಪಿ) ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಆಯೋಜಿಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಇದ್ರ ನಡುವೆ, 40 ಕ್ಷೇತ್ರಗಳನ್ನು ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಮನವಿ ಮಾಡುವ ಸಾಧ್ಯತೆ ಇದೆ.
ಹರಿಯಾಣದಲ್ಲಿ 10 ಸ್ಥಾನಗಳನ್ನು ಜಯಿಸಿರುವ ಜನನಾಯಕ ಜನತಾ ಪಾರ್ಟಿ (ಜೆಜೆಪಿ) ಮುಖ್ಯಸ್ಥ ದುಶ್ಯಂತ್ ಚೌಟಾಲ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಒಂದು ವೇಳೆ ಜನನಾಯಕ ಜನತಾ ಪಾರ್ಟಿ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ರೆ ಸಿಎಂ ಸ್ಥಾನಕ್ಕೆ ಪಟ್ಟುಹಿಡಿಯುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಜೊತೆ ಕೈಜೋಡಿಸಿದರೆ ಸರ್ಕಾರ ರಚನೆ ಅಸಾಧ್ಯ ಮತ್ತು ಪಕ್ಷೇತರರ ಬೆಂಬಲ ಅಗತ್ಯವಿದೆ.