ಜಪಾನ್: ಅನಾರೋಗ್ಯದಿಂದಾಗಿ ಬಳಲುತ್ತಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಎರಡು ವಾರದ ಅಂತರದಲ್ಲಿ ಅವರು ಎರಡು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಅಬೆ ಜಪಾನ್ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ಪ್ರಧಾನಿ ಎನಿಸಿಕೊಂಡಿದ್ದು, ಪ್ರಧಾನಿ ಕಚೇರಿಯಲ್ಲಿ ಅತೀ ಹೆಚ್ಚು ದಿನ ಕಳೆದ ಪ್ರಧಾನಿ ಎನಿಸಿದ್ದಾರೆ.