ಕರ್ನಾಟಕ

karnataka

ETV Bharat / bharat

ಜೆಇಇ, ನೀಟ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಂಬೈ ರೈಲುಗಳಲ್ಲಿ ಸಂಚರಿಸಲು ಅವಕಾಶ

ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರವೇ ರೈಲು ನಿಲ್ದಾಣಕ್ಕೆ ಆಗಮಿಸಲು ಪುರಾವೆಯಾಗಿರುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರೈಲುಗಳ ಸಂಖ್ಯೆಯನ್ನೂ ಸಹ ಹೆಚ್ಚಿಸಲಾಗಿದೆ. ಎಸ್‌ಒಪಿ ಅನುಸರಿಸಲು ಮತ್ತು ಪ್ರಯಾಣದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ.

By

Published : Sep 1, 2020, 8:41 AM IST

JEE, NEET students allowed in Mumbai trains for exams:Official
ಜೆಇಇ, ನೀಟ್ ವಿದ್ಯಾರ್ಥಿಗಳಿಗೆ ಮುಂಬೈ ರೈಲುಗಳಲ್ಲಿ ಸಂಚರಿಸಲು ಅವಕಾಶ

ಮುಂಬೈ: ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮುಂಬೈ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ ಇದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಸೆಪ್ಟೆಂಬರ್ 13ರಿಂದ ನೀಟ್ ಮತ್ತು ಇಂದಿನಿಂದ 1 ಮತ್ತು 6ರವರೆಗೆ ಜೆಇಇ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಕೇಂದ್ರ ಮತ್ತು ಪಶ್ಚಿಮ ರೈಲ್ವೆ ಜಂಟಿ ಪತ್ರಿಕಾ ಪ್ರಕಟಣೆಯ ಪ್ರಕಾರ, ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರವೇ ರೈಲು ನಿಲ್ದಾಣಕ್ಕೆ ಆಗಮಿಸಲು ಪುರಾವೆಯಾಗಿರುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರೈಲುಗಳ ಸಂಖ್ಯೆಯನ್ನೂ ಸಹ ಹೆಚ್ಚಿಸಲಾಗಿದೆ. ಎಸ್‌ಒಪಿ ಅನುಸರಿಸಲು ಮತ್ತು ಪ್ರಯಾಣದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚುವರಿ ಬುಕ್ಕಿಂಗ್​ ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ಥಳೀಯ ರೈಲುಗಳನ್ನು ಕೆಲವು ನಿಯಮಗಳೊಂದಿಗೆ ನಡೆಸಲಾಗುತ್ತಿದ್ದು, ಅಗತ್ಯ ಸೇವೆಗಳಲ್ಲಿ ತೊಡಗಿರುವ ಜನರಿಗೆ ಮಾತ್ರ ರೈಲು ಹತ್ತಲು ಅವಕಾಶವಿದೆ.

ಮಂಗಳವಾರ ಬೆಳಿಗ್ಗೆ ನಿಗದಿಯಾಗಿದ್ದ ಜೆಇಇ ಮುಖ್ಯ ಪರೀಕ್ಷೆಗೆ ಸ್ವಲ್ಪ ಮುಂಚಿತವಾಗಿ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಪ್ರವಾಹ ಪೀಡಿತ ಭಾಗಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಂದೂಡಬೇಕೆಂದು ಕೋರಿ ನಾಗರಿಕರೊಬ್ಬರು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ತುರ್ತು ವಿಚಾರಣೆಗೆ ಒಳಪಡಿಸುತ್ತದೆ.

ಪರೀಕ್ಷೆ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದ್ದು, ನ್ಯಾಯಾಲಯವು ಬೆಳಿಗ್ಗೆ 8.30ಕ್ಕೆ ವಿಚಾರಣೆ ಮುಂದೂಡಿದೆ. ಸೋಮವಾರ ಸಂಜೆ ಭಂಡಾರ ನಿವಾಸಿ ನಿತೇಶ್ ಬವಾಂಕರ್ ಕಳುಹಿಸಿದ ಪತ್ರವನ್ನು ಹೈಕೋರ್ಟ್ ವಿಚಾರಣೆಗೆ ತೆಗೆದುಕೊಂಡಿತ್ತು.

ABOUT THE AUTHOR

...view details