ರಾಂಚಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‌ಡೌನ್ ಅನ್ನು ಜುಲೈ 31 ರವರೆಗೆ ವಿಸ್ತರಿಸಿ ಜಾರ್ಖಂಡ್ ಸರ್ಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಿಸಲು ಜಾರ್ಖಂಡ್ ಮುಖ್ಯ ಕಾರ್ಯದರ್ಶಿ ಸುಖದೇವ್ ಸಿಂಗ್ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಧಾರ್ಮಿಕ ಸ್ಥಳಗಳು, ಶಾಲೆಗಳು, ಹೋಟೆಲ್, ಸ್ಪಾ ಮತ್ತು ಸಲೂನ್ಗಳನ್ನು ಮುಚ್ಚಲಾಗುತ್ತದೆ ಎಂದು ತಿಳಿಸಿದ್ದಾರೆ.
ಲಾಕ್‌ಡೌನ್ ವಿಸ್ತರಣೆಯ ನಿಬಂಧನೆಗಳನ್ನು ತಮ್ಮ ಪ್ರದೇಶದಲ್ಲಿ ಗಂಭೀರವಾಗಿ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶಿಸಲಾಗಿದೆ. ತುರ್ತು ಕೆಲಸದ ಹೊರತಾಗಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ.