ಬುರ್ಹಾನ್ಪುರ್(ಮಧ್ಯಪ್ರದೇಶ): ಪ್ರೀತಿ ನಿರಾಕರಿಸಿದ್ದಕ್ಕೆ ಕ್ರೋಧಗೊಂಡ ಯುವಕನೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕುವಿನಿಂದ ಇರಿದು, ತದನಂತರ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಬುರ್ಹಾನ್ಪುರ್ದಲ್ಲಿ ನಡೆದಿದೆ.
ಪ್ರೀತಿ ನಿರಾಕರಣೆ: ಕಾಲೇಜ್ನಲ್ಲೇ ವಿದ್ಯಾರ್ಥಿನಿಗೆ ಇರಿದು, ಆತ್ಮಹತ್ಯೆಗೆ ಯತ್ನಿಸಿದ ಯುವಕ! - ಪ್ರೀತಿಸಲು ನಿರಾಕರಣೆ
ತನ್ನ ಪ್ರೀತಿ ನಿರಾಕರಣೆ ಮಾಡಿದ್ದಕ್ಕಾಗಿ ಯುವಕನೋರ್ವ ಯುವತಿಗೆ ಚಾಕುವಿನಿಂದ ಇರಿದು ತಾನು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಕೃತ್ಯವೆಸಗಿದ ಯುವಕ ಹಾಗೂ ಯುವತಿ, ಇಬ್ಬರೂ ಬುರ್ಹಾನ್ಪುರ್ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಕ್ರೋಧಗೊಂಡ ಯುವಕ ಚಾಕುವಿನಿಂದ ಯುವತಿಗೆ ಇರಿದು ಬಳಿಕ ಕಾಲೇಜ್ನ ಮೂರನೇ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ. ಘಟನೆ ನಡೆದ ತಕ್ಷಣವೇ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಗಿರ್ವಾರ್ ಸಿಂಗ್ ತಿಳಿಸಿದ್ದಾರೆ.
ಕಾಲೇಜ್ನಲ್ಲಿ ಲಭ್ಯವಾಗಿರುವ ಸಿಸಿಟಿವಿ ಆಧಾರದ ಮೇಲೆ ಮೇಲೆ ನಾವು ದೃಶ್ಯಾವಳಿ ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.