ನವದೆಹಲಿ:ಅಯೋಧ್ಯೆಯ ಧನ್ನಿಪುರದಲ್ಲಿ ನಿರ್ಮಿಸಲಾಗುತ್ತಿರುವ ಮಸೀದಿಗೆ ಸಲಹೆಗಾರ ವಾಸ್ತುಶಿಲ್ಪಿಯಾಗಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿಶ್ವವಿದ್ಯಾಲಯದ ವಾಸ್ತುಶಿಲ್ಪ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಎಸ್‌ಎಂ ಅಖ್ತರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್ ತಿಳಿಸಿದೆ.
ಸುಪ್ರೀಂಕೋರ್ಟ್‌ನ ಸೂಚನೆಯ ಮೇರೆಗೆ ಉತ್ತರ ಪ್ರದೇಶ ಸರ್ಕಾರವು ಅಯೋಧ್ಯೆಯಲ್ಲಿ ಮಂಜೂರು ಮಾಡಿದ ಭೂಮಿಯಲ್ಲಿ ಮಸೀದಿ ಮತ್ತು ಇತರ ಸೌಲಭ್ಯಗಳನ್ನು ನಿರ್ಮಿಸಲು ಉತ್ತರ ಪ್ರದೇಶದ ಸುನ್ನಿ ಕೇಂದ್ರ ವಕ್ಫ್ ಮಂಡಳಿಯ 15 ಸದಸ್ಯರ ಟ್ರಸ್ಟ್ ಐಐಸಿಎಫ್ ಅನ್ನು ರಚಿಸಿತ್ತು.
ಅಯೋಧ್ಯೆ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್, ಕಳೆದ ವರ್ಷ ನವೆಂಬರ್ 9 ರಂದು, ದೇವಾಲಯದ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿರುವ ಸ್ಥಳವನ್ನು ಹಸ್ತಾಂತರಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು ಮತ್ತು ಅದಕ್ಕಾಗಿ ಒಂದು ಟ್ರಸ್ಟ್ ಅನ್ನು ಸ್ಥಾಪಿಸಿತ್ತು.