ಚಿಂದ್ವಾರಾ (ಮಧ್ಯಪ್ರದೇಶ): ನಾನು ಯಾವುದೇ ಹುದ್ದೆಗೆ ಆಸೆ ಪಡುವುದಿಲ್ಲ, ವಿಶ್ರಾಂತಿ ಪಡೆಯಲು ಸಿದ್ಧನಿದ್ದೇನೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಕಮಲ್ ನಾಥ್ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಸುಳಿವು ನೀಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.
ಭಾನುವಾರ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಮಲ್ ನಾಥ್, ನಾನು ಸಾಕಷ್ಟು ಸಮಯವನ್ನು ಕಳೆದಿದ್ದೇನೆ (ರಾಜಕೀಯದಲ್ಲಿ), ಯಾವುದೇ ಹುದ್ದೆ ಅಥವಾ ಸ್ಥಾನಕ್ಕಾಗಿ ನಾನು ಆಸೆ ಪಡುವುದಿಲ್ಲ ಎಂದರು.