ಮನಾಲಿ (ಹಿಮಾಚಲ ಪ್ರದೇಶ): ಕಳೆದ ಕೆಲ ತಿಂಗಳಿಂದ ಬಾಲಿವುಡ್ ನಟಿ ಕಂಗನಾ ರಣಾವತ್ ಕುಟುಂಬದೊಂದಿಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ನಿವಾಸದಲ್ಲಿ ವಾಸವಾಗಿದ್ದು, ಇಂದು ಬೆಳಗ್ಗೆ 11:30ರ ವೇಳೆ ನಿವಾಸದ ಪಕ್ಕದಲ್ಲೇ ಗುಂಡಿನ ದಾಳಿ ನಡೆದಿದೆ.
ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಕಂಗನಾ ಹೇಳಿದ್ದು, ಇಂತಹ ಬೆದರಿಕೆಗಳಿಗೆ ತಾವು ಹೆದರುವುದಿಲ್ಲ ಎಂದಿದ್ದಾರೆ. ನನ್ನ ಬೆದರಿಸುವ ಉದ್ದೇಶದಿಂದ ಈ ರೀತಿಯಾಗಿ ಮಾಡಲಾಗುತ್ತಿದೆ ಎಂದಿದ್ದಾರೆ.