ಮುಂಬೈ:ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದ್ದು, ಇದೀಗ ಡ್ರಗ್ಸ್ ಸೇವನೆ ಮಾಡಿರುವ ಆರೋಪದ ಮೇಲೆ ಅವರನ್ನ ವಿಚಾರಣೆಗೊಳಪಡಿಸಲಾಗುವುದು ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ.
ಕಂಗನಾ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿರುವ ಗೃಹ ಸಚಿವರು, ಅಭಯನ್ ಸುಮನ್ ಅವರು ನಟಿಯ ಮೇಲೆ ಗಂಭೀರ ಆರೋಪ ಮಾಡಿದ್ದರಿಂದ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ಸುಮನ್ ಅವರು ಕಂಗನಾ ಡ್ರಗ್ಸ್ ತೆಗೆದುಕೊಳ್ಳುವುದಾಗಿ ಹಾಗೂ ತಮಗೂ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಅಕ್ರಮ ನಿರ್ಮಾಣ ಆರೋಪ: ಕಂಗನಾ ಕಚೇರಿ ಸೀಲ್ ಮಾಡಿದ ಬಿಎಂಸಿ