ನವದೆಹಲಿ: ವರ್ಚುವಲ್ ತರಬೇತಿ ಕಾರ್ಯಾಗಾರದಲ್ಲಿ ಹಿಂದಿ ಹೇರಿಕೆಗೆ ಯತ್ನಿಸಿದ ಕುರಿತು ತಕ್ಷಣವೇ ತನಿಖೆಗೆ ಆದೇಶಿಸಬೇಕು ಮತ್ತು ಭಾಷೆಯ ಆಧಾರದ ಮೇಲೆ ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ನಾಯಕ್ ಅವರಿಗೆ ಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ಪತ್ರ ಬರೆದು ಆಗ್ರಹಿಸಿದ್ದಾರೆ.
ಆಯುಷ್ ಇಲಾಖೆ ನಡೆಸಿದ ವರ್ಚುವಲ್ ಮೀಟಿಂಗ್ನಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿ ಹಿಂದಿ ಹೇರಿಕೆ ಮಾಡಲಾಗಿದೆ. ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಅವರು ಹಿಂದಿ ಭಾಷೆ ಬಾರದವರು ಮೀಟಿಂಗ್ನಿಂದ ಹೊರ ಹೋಗುವಂತೆ ಹೇಳಿದ್ದಾರೆ. ಇದು ಸಂವಿಧಾನ ನಿಮಯಗಳ ಉಲ್ಲಂಘನೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಮತ್ತು ಇಲಾಖೆಯ ಎಲ್ಲ ಕಾರ್ಯಕ್ರಮಗಳಲ್ಲಿ ಇಂಗ್ಲೀಷ್ ಬಳಸಬೇಕೆಂದು ಆಗ್ರಹಿಸಿ ಸಂಸದೆ ಪತ್ರ ಬರೆದಿದ್ದಾರೆ.