ನವದೆಹಲಿ : ಕನ್ನಡ ನಾಡು, ನುಡಿ ಹಾಗೂ ವಿವಿಧ ವಲಯಗಳಲ್ಲಿ ಕನ್ನಡ ಅಭಿವೃದ್ಧಿ ಮೊದಲಾದ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದ ನಿಯೋಗವು ಕೇಂದ್ರ ಸಚಿವರ ಭೇಟಿಗೆ ದೆಹಲಿಗೆ ಆಗಮಿಸಿದೆ.
ದೆಹಲಿಗೆ ತೆರಳಿದ ಕನ್ನಡ ಪ್ರಾಧಿಕಾರಭಿವೃದ್ದಿ ನಿಗಮ, ಪೂರ್ವಭಾವಿ ಸಭೆ - ದೆಹಲಿಗೆ ಆಗಮಿಸಿದ ಕನ್ನಡ ಪ್ರಾಧಿಕಾರಭಿವೃದ್ದಿ ನಿಗಮ
ಕನ್ನಡ ನಾಡು, ನುಡಿ ಹಾಗೂ ವಿವಿಧ ವಲಯಗಳಲ್ಲಿ ಕನ್ನಡ ಅಭಿವೃದ್ಧಿ ಮೊದಲಾದ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ನೇತೃತ್ವದ ನಿಯೋಗವು ಕೇಂದ್ರ ಸಚಿವರ ಭೇಟಿಗೆ ದೆಹಲಿಗೆ ಆಗಮಿಸಿದೆ.
ಕೇಂದ್ರ ಸಚಿವರ ಭೇಟಿಗೆ ಮೊದಲು ಪೂರ್ವಭಾವಿಯಾಗಿ ಕರ್ನಾಟಕದ ಕೇಂದ್ರ ಸಚಿವರು ಹಾಗೂ ಸಂಸದರ ಸಭೆ ನಡೆಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ನಿವಾಸದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ, ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ, ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಸಂಸದರು ಭಾಗಿಯಾಗಿದ್ದರು
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗದಲ್ಲಿ ಶಿಕ್ಷಣ ತಜ್ಞ ಶ್ರೀ ಗುರುರಾಜ್ ಕರ್ಜಗಿ, ರಂಗಕರ್ಮಿ ಹಾಗು ಚಲನಚಿತ್ರ ನಿರ್ದೇಶಕ ಶ್ರೀ ಪ್ರಕಾಶ್ ಬೆಳವಾಡಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.