ಕಣ್ಣೂರು(ಕೇರಳ): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನವನ್ನು ತಡೆಯಲು ಯತ್ನಿಸಿದ ಕೇರಳ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕೇರಳ ಪ್ರವಾಸದಲ್ಲಿರುವ ಸಿಎಂ ಬಿಎಸ್ವೈ ಇಂದು ಕಣ್ಣೂರಿಗೆ ತೆರಳಿದ್ದರು. ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಕೆಎಸ್ಯು(ಕೇರಳ ವಿದ್ಯಾರ್ಥಿ ಸಂಘಟನೆ) ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು, ಯಡಿಯೂರಪ್ಪ ಬೆಂಗಾವಲು ವಾಹನಗಳನ್ನು ತಡೆಯಲು ಯತ್ನಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದರು.