ನವದೆಹಲಿ:ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥ ಆಚರಿಸಲಾಗುವ 20ನೇ ಕಾರ್ಗಿಲ್ ವಿಜಯೋತ್ಸವ'ದ ಪ್ರಯುಕ್ತ ವಿಕ್ಟರಿ ಜ್ಯೋತಿ ಯಾತ್ರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು.
20ನೇ ಕಾರ್ಗಿಲ್ ವಿಜಯೋತ್ಸವ.. ದೆಹಲಿಯಿಂದ ಹೊರಟ ವಿಕ್ಟರಿ ಜ್ಯೋತಿ.. -
ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದು, ದೇಶದ ಪ್ರಮುಖ ನಗರಳಲ್ಲಿ ಇದು ಸಂಚರಿಸಲಿದೆ. 1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದೆ. ಅಂದು ಈ ಯಾತ್ರೆ ಸಮಾಪ್ತಿಗೊಳ್ಳಲಿದೆ.
ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದು, ದೇಶದ ಪ್ರಮುಖ ನಗರಗಳಲ್ಲಿ ಇದು ಸಂಚರಿಸಲಿದೆ. 1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಭಾರತ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದೆ. ಅಂದು ಈ ಯಾತ್ರೆ ಸಮಾಪ್ತಿಗೊಳ್ಳಲಿದೆ.
ಈ ವೇಳೆ ಮಾತನಾಡಿದ ರಾಜನಾಥ್ ಸಿಂಗ್ ಅವರು, ದೇಶಕ್ಕೆ ತಮ್ಮ ಪ್ರಾಣ ಅರ್ಪಿಸಿದ ಸೈನಿಕರನ್ನು ಹೃದಯಪೂರ್ವಕವಾಗಿ ಸ್ಮರಿಸುತ್ತೇನೆ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬಸ್ಥರ ತ್ಯಾಗ ಮನೋಭಾವನೆ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.