ಕರ್ನಾಟಕ

karnataka

ETV Bharat / bharat

ವೃತ್ತಿಪರ ಕೋರ್ಸ್​ಗಳಿಗೆ ನಡೆಯುವ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ‌ - ಕೆಇಎ

ಮುಂದೂಡಲಾಗಿದ್ದ ಸಿಇಟಿ ಪರೀಕ್ಷೆಗೆ ಸಾಮಾನ್ಯ ಪರೀಕ್ಷಾ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

kea
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

By

Published : May 13, 2020, 11:49 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 2020ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಮೊದಲನೇ ವರ್ಷದ ಮೊದಲನೇ ಸೆಮಿಸ್ಟರ್​​​ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸುಗಳು ಮತ್ತು ಬಿ ಫಾರ್ಮಾ ಮತ್ತು ಫಾರ್ಮಾ ಡಿ ಕೋರ್ಸುಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ವೇಳಾಪಟ್ಟಿ ಹೀಗಿದೆ‌.

  • 30-7-2020ರಂದು ಜೀವಶಾಸ್ತ್ರ, ಗಣಿತಶಾಸ್ತ್ರ
  • 31-7-2020ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ
  • 01-8-2020ರಂದು ಕನ್ನಡ ಭಾಷಾ ಪರೀಕ್ಷೆ( ಬೆಂಗಳೂರು ಕೇಂದ್ರದಲ್ಲಿ ಮಾತ್ರ)

60 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10-30ರಿಂದ 11-50, ಮಧ್ಯಾಹ್ನ 2-30ರಿಂದ 3-50ರವರೆಗೆ ಪರೀಕ್ಷಾ ಸಮಯ ನಿಗದಿ ಮಾಡಲಾಗಿದೆ‌.‌ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್​ಸೈಟ್ kea.kar.nic.inಗೆ ಭೇಟಿ ನೀಡಬಹುದು.

ABOUT THE AUTHOR

...view details