ಕರ್ನಾಟಕ

karnataka

ETV Bharat / bharat

ಪ್ರಧಾನಿ  ನರೇಂದ್ರ ಮೋದಿ, ನಿತಿನ್​ ಗಡ್ಕರಿ ಮೀಟ್​ ಮಾಡಿದ ಬಿಎಸ್​ವೈ... ಮಹತ್ವದ ಚರ್ಚೆ - ಬಿಎಸ್​ವೈ

ಪ್ರಧಾನಿ ನರೇಂದ್ರ ಮೋದಿ, ನಿತಿನ್​ ಗಡ್ಕರಿ ಮೀಟ್​ ಮಾಡಿರುವ ಬಿಎಸ್​ವೈ ಕೆಲವೊಂದು ಮಹತ್ವದ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ರಾಜ್ಯ ಸಚಿವ ಸಂಪುಟ ರಚನೆ ಸಲುವಾಗಿ ದೆಹಲಿಗೆ ತೆರಳಿರುವ ಯಡಿಯೂರಪ್ಪ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರನ್ನ ಭೇಟಿ ಮಾಡುವ ಸಾಧ್ಯತೆ ಇದೆ.

ಬಿಎಸ್​ ಯಡಿಯೂರಪ್ಪ/Chief Minister BS Yediyurappa

By

Published : Aug 6, 2019, 4:05 PM IST

ನವದೆಹಲಿ:ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಇನ್ನೂ ಸಚಿವ ಸಂಪುಟ ರಚನೆ ಆಗಿಲ್ಲ. ಈ ಹಿನ್ನೆಲೆ ಹೈಕಮಾಂಡ್​ ಭೇಟಿ ಮಾಡಲು ಸಿಎಂ ಬಿಎಸ್​ವೈ ದೆಹಲಿಗೆ ತೆರಳಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರನ್ನ ಭೇಟಿ ಮಾಡಿದರು.

ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವರಾದ ಪ್ರಹಾದ್​ ಜೋಶಿ ಹಾಗೂ ಕಾನೂನು ಸಚಿವ ಡಿವಿ ಸದಾನಂದಗೌಡ ಸೇರಿದಂತೆ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ಹಾಗೂ ಜಗದೀಶ್​ ಶೆಟ್ಟರ್​ ಪ್ರಧಾನಿಯವರನ್ನ ಭೇಟಿ ಮಾಡಿದರು. ಈ ವೇಳೆ ರಾಜ್ಯದ ಕೆಲವೊಂದು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆದಿರುವ ಬಗ್ಗೆ ತಿಳಿದು ಬಂದಿದೆ.

ಇದಾದ ಬಳಿಕ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿಯವರನ್ನ ಬಿಎಸ್​ವೈ ನೇತೃತ್ವದ ತಂಡ ಭೇಟಿ ಮಾಡಿ, ರಾಜ್ಯ ರಸ್ತೆ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ಶಾಸಕ ಆರ್​ ಅಶೋಕ್​, ರಾಜ್ಯಸಭೆ ಸದಸ್ಯ ಪ್ರಭಾಕರ್​ ಕೋರೆ, ಸಂಸದ ಜಿಎಂ ಸಿದ್ದೇಶ್ವರ್​​ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಮಧ್ಯೆ, ಬೆಳೆವಿಮೆ ನೋಂದಣಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್​​​ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಸಲ್ಲಿಸಿದರು. ಸಂಸತ್ ಭವನದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಒಳಗೊಂಡಂತೆ ಗ್ರಾಮೀಣಾಭಿವೃದ್ಧಿ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಿದರು.

ಈ ಸಂದರ್ಭದಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ನೋಂದಣಿ ಅವಧಿಯನ್ನು ಆಗಸ್ಟ್ 14 ರ ವರೆಗೆ ವಿಸ್ತರಿಸುವಂತೆ ಕೇಂದ್ರ ಸಚಿವರಿಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದರು.ಈ ವೇಳೆ ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ, ಶಾಸಕರಾದ ಜಗದೀಶ್ ಶೆಟ್ಟರ್ ಮತ್ತು ಆರ್. ಅಶೋಕ್ ಉಪಸ್ಥಿತರಿದ್ದರು.

ಜೆ.ಪಿ ನಡ್ಡಾ ಭೇಟಿಯಾದ ಸಿಎಂ
ಮುಖ್ಯಮಂತ್ರಿ ಯಡಿಯೂರಪ್ಪ ನವದೆಹಲಿಯ ಸಂಸತ್ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು.ಕೆಲ ಕಾಲ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಆದ ನಂತರ ಇದೇ ಮೊದಲ ಬಾರಿ ಬಿಎಸ್​​ವೈ ರಾಷ್ಟ್ರೀಯ ಕಾರ್ಯಾಧ್ಯಕ್ಷರೊಂದಿಗೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.

ರಾಜ್ಯ ಸಚಿವ ಸಂಪುಟ ಆಕಾಂಕ್ಷಿಗಳ ಪಟ್ಟಿ ಹಿಡಿದುಕೊಂಡು ಬಿಎಸ್​ವೈ ದೆಹಲಿಗೆ ತೆರಳಿದ್ದು, ಯಾರೆಲ್ಲ ಸಚಿವ ಸಂಪುಟ ಸೇರಬೇಕು ಎಂಬುದಕ್ಕೆ ಬಿಜೆಪಿ ಹೈಕಮಾಂಡ್​ ಭೇಟಿ ಮಾಡಿ ಫೈನಲ್​ ಮಾಡುವ ಸಾಧ್ಯತೆ ಇದೆ.

ABOUT THE AUTHOR

...view details