ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಂಡಾಯ ಶಾಸಕರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸ್ಪೀಕರ್ ವಿರುದ್ಧ ಆರೋಪ ಮಾಡಿರುವ ಶಾಸಕರು, ಸ್ಪೀಕರ್ ರಮೇಶ್ ಕುಮಾರ್ ಅವರು ಸಂವಿಧಾನಬದ್ಧವಾದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿಲ್ಲ. ನಮ್ಮ ರಾಜೀನಾಮೆ ಅಂಗೀಕಾರವನ್ನು ಬೇಕಂತಲೇ ತಡ ಮಾಡುತ್ತಿದ್ದಾರೆ ಎಂದಿದ್ದಾರೆ.