ಜಮ್ಮು ಕಾಶ್ಮೀರ: ಪುಲ್ವಾಮಾ ಜಿಲ್ಲೆಯ ಪಂಪೋರ್ ಪಟ್ಟಣದಲ್ಲಿ ಎಲ್‌ಇಟಿ ಉಗ್ರ ಸಂಘಟನೆಯ ಸಹಾಯಕನೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಂಪೋರ್ ನಿವಾಸಿ ಜುನೈದ್ ಅಲ್ತಾಫ್ ಬಂಧಿತ ವ್ಯಕ್ತಿ. ಇತ ಉಗ್ರರಿಗೆ ಆಶ್ರಯ ನೀಡಲು ಸಹಾಯ ಮಾಡುತ್ತಿದ್ದ ಎಂದು ಅವಂತಿಪೋರಾ ಪೊಲೀಸರು ಹೇಳಿದ್ದಾರೆ.

ಇನ್ನು ಆರೋಪಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ಕಮಾಂಡರ್‌ಗಳೊಂದಿಗೆ ಜುನೈದ್ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದ್ದು, ಬಂಧಿತನಿಂದ ಕೃತ್ಯಕ್ಕೆ ಬಳಸಿದ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.