ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಸೋಂಕು ತಗುಲಿ ಸಾವನ್ನಪ್ಪಿರುವ ವೈದ್ಯ ಆಸೀಂ ಗುಪ್ತಾ ಕುಟುಂಬಕ್ಕೆ ಮುಖ್ಯಮಂತ್ರಿ ಕೇಜ್ರಿವಾಲ್ ಒಂದು ಕೋಟಿ ರೂ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.
ದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿದ್ದ ಇವರಿಗೆ ಜೂನ್ 6ರಂದು ಸೋಂಕು ಕಾಣಿಸಿತು. ಇದಾದ ಬಳಿಕ ಅವರನ್ನು ಸಾಕೇತ್ನ ಮ್ಯಾಕ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.