ತಿರುವನಂತಪುರಂ:ಕೇರಳ ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ವಿರುದ್ಧ ಪ್ರತಿಪಕ್ಷ ಮಂಡಿಸಿದ್ದ ನಿರ್ಣಯವನ್ನು ವಿಧಾನಸಭೆ ತಿರಸ್ಕರಿಸಿದೆ.
ಕೇರಳದ ಬಹುಕೋಟಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕೇರಳ ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಹೆಸರು ಕೇಳಿಬಂದಿದೆ. ಹೀಗಾಗಿ ಇದರ ವಿರುದ್ಧ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದ ಪ್ರತಿಪಕ್ಷ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್), ಸ್ಪೀಕರ್ ಸ್ಥಾನದಿಂದ ಅವರನ್ನು ಕೆಳಗಿಳಿಸುವಂತೆ ಆಗ್ರಹಿಸಿ ನಿರ್ಣಯ ಮಂಡಿಸಿತ್ತು.
ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ ಕೇರಳ ಸ್ಪೀಕರ್ ಹೆಸರು.. ಶ್ರೀರಾಮಕೃಷ್ಣನ್ ವಿರುದ್ಧ ನಿರ್ಣಯ ಮಂಡಿಸಿದ ಪ್ರತಿಪಕ್ಷ
2019ರ ಜುಲೈ 5ರಂದು ತಿರುವನಂತಪುರಂನಲ್ಲಿ 14.82 ಕೋಟಿ ರೂ. ಮೌಲ್ಯದ 30 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದರು. ಪ್ರಕರಣದ ತನಿಖೆಯನ್ನು ಇಡಿ ಹಾಗೂ ಸಿಬಿಐ ನಡೆಸುತ್ತಿದ್ದು, ಈಗಾಗಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್, ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಸೇರಿದಂತೆ ಕೆಲ ಆರೋಪಿಗಳು ಅರೆಸ್ಟ್ ಆಗಿದ್ದಾರೆ.