ತಿರುವನಂತಪುರಂ:ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಮುಖ್ಯ ಕಾರ್ಯದರ್ಶಿಯಾದ ಎಂ.ಶಿವಶಂಕರ್ಗೆ ನಿರೀಕ್ಷಣಾ ಜಾಮೀನು ನೀಡಲು ಅಲ್ಲಿನ ಹೈಕೋರ್ಟ್ ತಿರಸ್ಕರಿಸಿದೆ.
ಕೇರಳ ಹೈಕೋರ್ಟ್ನಲ್ಲಿ ಅಶೋಕ್ ಮೆನನ್ ನೇತೃತ್ವದ ಪೀಠ ನಿರೀಕ್ಷಣಾ ಶಿವಶಂಕರ್ಗೆ ಜಾಮೀನು ನೀಡಲು ನಿರಾಕರಿಸಿದ್ದು, ಜಾರಿ ನಿರ್ದೇಶನಾಲಯ ಹಾಗೂ ತೆರಿಗೆ ಇಲಾಖೆ ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದೆ.
ಜಾಮೀನು ಅರ್ಜಿ ತಿರಸ್ಕಾರವಾದ ಹಿನ್ನೆಲೆಯಲ್ಲಿ ಶಿವಶಂಕರ್ ಅವರನ್ನು ಜಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.
ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಶಿವಶಂಕರ್ ಅವರನ್ನು ಕೇರಳ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು.
ಇದಾದ ನಂತರ ಜಾರಿ ನಿರ್ದೇಶನಾಲಯ ಹಾಗೂ ತೆರಿಗೆ ಅಧಿಕಾರಿಗಳು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದವು.