ಕೊಚ್ಚಿ (ಕೇರಳ):ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅಪರಾಧದಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಇದು ದೇಶದ ಆರ್ಥಿಕತೆಗೆ ಹಾನಿ ಮಾಡುತ್ತದೆ ಮತ್ತು ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.
ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿ ವಿರೋಧಿಸಿ ಎರ್ನಾಕುಲಂನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯಲ್ಲಿ, ಕಸ್ಟಮ್ಸ್ ಇಲಾಖೆ ಈ ಮಾತು ದಾಖಲಿಸಿದೆ. '' ಅರ್ಜಿದಾರರು ಅತ್ಯಂತ ಪ್ರಭಾವಶಾಲಿ, ಅವರು ಕೇರಳ ಪೊಲೀಸರಲ್ಲಿ ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ. ಅರ್ಜಿದಾರರು ತಮ್ಮ ಕಮಾಂಡಿಂಗ್ ಸ್ಥಾನದ ಲಾಭವನ್ನು ಪಡೆದುಕೊಳ್ಳಲು ಇತರರಿಗೆ ಬೆದರಿಕೆ ಹಾಕಿದ್ದಾರೆ ಎಂದು ವಿಶ್ವಾಸಾರ್ಹ ದಾಖಲೆಗಳಿವೆ" ಎಂದು ಕೋರ್ಟ್ಗೆ ಸಲ್ಲಿಸಿರುವ ವರದಿಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.