ಕೊಚ್ಚಿ (ಕೇರಳ): ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಯಾಗಿರುವ ಸ್ವಪ್ನಾ ಸುರೇಶ್ ಸೇರಿದಂತೆ 12 ಆರೋಪಿಗಳ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 8 ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯ ವಿಸ್ತರಿಸಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣ: ಆರೋಪಿಗಳಿಗೆ ಅ.8ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ - ಚಿನ್ನ ಕಳ್ಳ ಸಾಗಣೆ ಸ್ವಪ್ನಾ ಸುರೇಶ್
ಸ್ವಪ್ನಾ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನು ನೀಡಲು ನಿರಾಕರಿಸಿತು. ಇದಕ್ಕೂ ಮೊದಲು ಜಾಮೀನು ಪಡೆದುಕೊಳ್ಳಲು ಸ್ವಪ್ನಾ ಎಲ್ಲಾ ರೀತಿಯ ಕಸರತ್ತನ್ನು ನಡೆಸಿದ್ದರು.
ಚಿನ್ನ ಕಳ್ಳಸಾಗಣೆ ಪ್ರಕರಣ
ಸ್ವಪ್ನಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿದೆ. ಇದಕ್ಕೂ ಮೊದಲು ಜಾಮೀನು ಪಡೆಯುವ ಉದ್ದೇಶದಿಂದ ಆರೋಪಿ ಸ್ವಪ್ನಾ ತನ್ನ ಆರೋಗ್ಯ ಪರಿಸ್ಥಿತಿಗಳನ್ನು ಉಲ್ಲೇಖಿಸಿದ್ದಳು. ಆದರೆ ನ್ಯಾಯಾಲಯ ಅದನ್ನು ನಿರಾಕರಿಸಿದೆ. ಸಂಬಂಧಿಕರನ್ನು ಭೇಟಿಯಾಗಲು ಸ್ವಪ್ನಾಗೆ ಅವಕಾಶ ನೀಡಬೇಕು ಎಂದು ನ್ಯಾಯಾಲಯವು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಈ 12 ಮಂದಿ ಆರೋಪಿಗಳ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಲಾಯಿತು.