ಕರ್ನಾಟಕ

karnataka

ETV Bharat / bharat

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ಅರ್ಜಿ ವಜಾ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಯಾರಿಸಿದ ಕೇಸ್ ಡೈರಿಯನ್ನು ವಿವರವಾಗಿ ಪರಿಶೀಲಿಸಿದ ಎನ್ಐಎ ವಿಶೇಷ ನ್ಯಾಯಾಲಯ, ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜಾಮೀನು ಅರ್ಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸಬೇಕಾಗಿದೆ ಎಂದು ಪ್ರತಿಪಾದಿಸಿದೆ.

swapna suresh
ಸ್ವಪ್ನಾ ಸುರೇಶ್

By

Published : Aug 10, 2020, 7:31 PM IST

ಕೊಚ್ಚಿ(ಕೇರಳ): ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜಾಮೀನು ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಯಾರಿಸಿದ ಕೇಸ್ ಡೈರಿಯನ್ನು ವಿವರವಾಗಿ ಪರಿಶೀಲಿಸಿದ ನ್ಯಾಯಾಲಯ, ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜಾಮೀನು ಅರ್ಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸಬೇಕಾಗಿದೆ ಎಂದು ಪ್ರತಿಪಾದಿಸಿದೆ.

ಕಾನೂನುಬಾಹಿರ ಚಟುವಟಿಕೆ(ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 15 ರ ಅಡಿಯಲ್ಲಿ ನೇರವಾಗಿ ಬರುವ ಈ ಕೃತ್ಯವನ್ನು ಆರೋಪಿಗಳು ಉದ್ದೇಶಪೂರ್ವಕವಾಗಿ ಮಾಡಿದ್ದಾರೆ ಎಂಬುದಕ್ಕೆ ಪ್ರಾಥಮಿಕ ಸಾಕ್ಷ್ಯಾಧಾರಗಳಿವೆ ಎಂದು ಎನ್ಐಎ ಹೇಳಿದೆ.

ಜಾಮೀನು ಅರ್ಜಿ ಸಲ್ಲಿಸಿದ್ದ ಸ್ವಪ್ನಾ ಸುರೇಶ್, ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರವಿಲ್ಲದೆ ನನ್ನನ್ನು ಎಳೆದು ತಂದಿದ್ದಾರೆ. ಈ ಪ್ರಕರಣವು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ 'ರಾಜಕೀಯ ಪೈಪೋಟಿಯ' ಒಂದು ಭಾಗವಾಗಿದೆ. ಇದರೊಂದಿಗೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಬಣ್ಣದ ಕತೆಗಳಿಂದ ಪ್ರೇರಿತವಾಗಿದೆ ಎಂದು ಆರೋಪಿಸಿದ್ದರು.

ಕಳೆದ ತಿಂಗಳು ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್​ನಲ್ಲಿದ್ದ 14.82 ಕೋಟಿ ರೂ. ಮೌಲ್ಯದ 30 ಕೆ.ಜಿ ಚಿನ್ನವನ್ನು ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ವಶ ಪಡಿಸಿಕೊಂಡಿದ್ದರು. ಈ ಸಂಬಂಧ ಆರೋಪಿಗಳಾದ ಸರಿತ್ ಪಿಎಸ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಬಂಧಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದೆ.

ABOUT THE AUTHOR

...view details