ಕರ್ನಾಟಕ

karnataka

ETV Bharat / bharat

ಚಿನ್ನ ಕಳ್ಳಸಾಗಣೆ ಪ್ರಕರಣ​: ಆ. 21ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ - ಸ್ವಪ್ನಾ ಸುರೇಶ್

ಈವರೆಗೆ ಕಸ್ಟಮ್​ ಅಧಿಕಾರಿಗಳ ವಶದಲ್ಲಿದ್ದ ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಗಸ್ಟ್​​ 21ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ.

Kerala gold smuggling
ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣ

By

Published : Aug 1, 2020, 2:14 PM IST

ತಿರುವನಂತಪುರಂ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಹಾಗೂ ಸಂದೀಪ್​ ನಾಯರ್​ರನ್ನು ಆಗಸ್ಟ್​​ 21ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇಬ್ಬರು ಆರೋಪಿಗಳನ್ನೂ ಕೋವಿಡ್​ ಪರೀಕ್ಷೆಗೆ ಒಳಪಡಿಸಲಿದ್ದು, ಎರ್ನಾಕುಲಂ ಜಿಲ್ಲಾ ಕಾರಾಗೃಹದಲ್ಲಿರಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಯುಎಇ ಕಾನ್ಸುಲೇಟ್‌ನ ಮಾಜಿ ಉದ್ಯೋಗಿ ಪಿ ಎಸ್​ ಸರಿತ್ ಎಂಬುವರ ಬಳಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂಪಾಯಿ ಮೌಲ್ಯದ 30 ಕೆ.ಜಿ. ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜುಲೈ 5ರಂದು ವಶಪಡಿಸಿಕೊಂಡಿದ್ದರು. ಬಳಿಕ ಕಳ್ಳಸಾಗಣೆಯ ಸಂಪರ್ಕ ಜಾಲ ಹುಡುಕುತ್ತಾ ಹೋದಾಗ ಯುಎಇ ಕಾನ್ಸುಲೇಟ್‌ನ ಮಾಜಿ ಉದ್ಯೋಗಿ ಮತ್ತು ಐಟಿ ಇಲಾಖೆಯ ಉದ್ಯೋಗಿಯಾಗಿದ್ದ ಸ್ವಪ್ನಾ ಸುರೇಶ್ ಹಾಗೂ ಸಂದೀಪ್​ ನಾಯರ್​ ಪ್ರಕರಣದ ಪ್ರಮುಖ ಆರೋಪಿಗಳೆಂಬುದು ಬಯಲಾಗಿತ್ತು.

ಈವರೆಗೆ ಕಸ್ಟಮ್​ ಅಧಿಕಾರಿಗಳ ವಶದಲ್ಲಿದ್ದ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿರುವ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (ಆರ್ಥಿಕ ಅಪರಾಧ ವಿಭಾಗ) ಆ. 21ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ABOUT THE AUTHOR

...view details