ಕರ್ನಾಟಕ

karnataka

ETV Bharat / bharat

ಇಡುಕ್ಕಿ ಭೂಕುಸಿತ: ಮೃತರ ಸಂಖ್ಯೆ 58ಕ್ಕೆ ಏರಿಕೆ

ಮತ್ತೆರಡು ಮೃತದೇಹಗಳು ಸಿಕ್ಕಿದ್ದು, ಕೇರಳದ ಇಡುಕ್ಕಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ

Idukki landslide
ಇಡುಕ್ಕಿ ಭೂಕುಸಿತ

By

Published : Aug 16, 2020, 1:14 PM IST

ಇಡುಕ್ಕಿ: ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ ಎಂದು ಇಡುಕ್ಕಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.

ಆಗಸ್ಟ್​ 6ರಂದು ಇಡುಕ್ಕಿಯ ರಾಜಮಾಲಾದ ಪೆಟ್ಟಿಮುಡಿಯಲ್ಲಿ ಭೂಕುಸಿತ ಉಂಟಾಗಿತ್ತು. ನಿನ್ನೆಯವರೆಗೂ 56 ಮೃತದೇಹಗಳನ್ನು ಹೊರ ತೆಗೆಯಲಾಗಿತ್ತು. ಇದೀಗ ಮತ್ತೆ ಎರಡು ಮೃತದೇಹಗಳು ಸಿಕ್ಕಿದ್ದು, ಸಾವಿನ ಸಂಖ್ಯೆ 58ಕ್ಕೆ ಏರಿಕೆಯಾಗಿದೆ.

ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಸುಮಾರು 80 ಜನರು ಇದ್ದರು. ಈ ಪೈಕಿ 12 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಮಣ್ಣಿನಡಿ ಸಿಲುಕಿರುವ ಉಳಿದ ಮೃತದೇಹಗಳಿಗಾಗಿ ಎನ್​ಡಿಆರ್​ಎಫ್​, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ABOUT THE AUTHOR

...view details