ಕರ್ನಾಟಕ

karnataka

ETV Bharat / bharat

ಎಸ್‌ಎಸ್‌ಎಲ್‌ಸಿ, ಪ್ಲಸ್ ಟು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಕೇರಳ ಶಾಲೆಗಳು ಸಜ್ಜು - ಕೋವಿಡ್-19 ಸಾಂಕ್ರಾಮಿಕದಿಂದಾದಗಿ ಮುಚ್ಚಲಾಗಿದ್ದ ಶಾಲೆಗಳು

ಕೇರಳದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್ - ಟು ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳು ಕೊರೊನಾ ಮಾರ್ಗಸೂಚಿಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತಾ ಪ್ರಾರಂಭವಾಗಲಿವೆ.

Kerala schools
Kerala schools

By

Published : Jan 1, 2021, 9:01 AM IST

ಕಣ್ಣೂರು (ಕೇರಳ):ಸುಮಾರು 10 ತಿಂಗಳ ಕಾಲ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಮುಚ್ಚಲಾಗಿದ್ದ ಶಾಲೆಗಳು, ಜನವರಿ 1ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ.

ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-ಟು ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳು ಕೊರೊನಾ ಮಾರ್ಗಸೂಚಿಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತಾ ಪ್ರಾರಂಭವಾಗಲಿವೆ.

ತರಗತಿ ಕೊಠಡಿಗಳನ್ನು ಸ್ಯಾನಿಟೈಸ್​ಗೊಳಿಸಲಾಗಿದೆ ಮತ್ತು ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್​ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹ್ಯಾಂಡ್ ಸ್ಯಾನಿಟೈಸರ್, ಸೋಪ್, ಥರ್ಮಲ್ ಸ್ಕ್ಯಾನರ್ ಮತ್ತು ಥರ್ಮೋಸೆಟ್​ಗಳನ್ನು ಶಾಲಾ ಆವರಣದಲ್ಲಿ ಒದಗಿಸಲಾಗುತ್ತಿದೆ.

ನೈರ್ಮಲ್ಯೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ತರಗತಿ ಕೊಠಡಿಗಳು, ಗ್ರಂಥಾಲಯಗಳು, ಪ್ರಯೋಗಾಲಯಗಳು, ವಿಶ್ರಾಂತಿ ಕೊಠಡಿಗಳು ಮತ್ತು ನೀರಿನ ಮೂಲಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗುತ್ತಿದೆ.

ಆರಂಭದಲ್ಲಿ ಶೇಕಡಾ 50ರಷ್ಟು ವಿದ್ಯಾರ್ಥಿಗಳು ಮಾತ್ರ ಶಾಲೆ ತಲುಪಲಿದ್ದಾರೆ. ಶಾಲೆಗಳನ್ನು ತಲುಪಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳ ಮೂಲಕ ತಮ್ಮ ಅಧ್ಯಯನವನ್ನು ಮುಂದುವರಿಸಲು ಅವಕಾಶ ನೀಡಲಾಗಿದೆ.

ABOUT THE AUTHOR

...view details