ಕರ್ನಾಟಕ

karnataka

ETV Bharat / bharat

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ:  ಆರೋಪಿ ಬಂಧನ - ಉತ್ತರ ದೆಹಲಿಯಲ್ಲಿ ಅತ್ಯಾಚಾರ

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

rape
rape

By

Published : Jul 28, 2020, 8:47 AM IST

ನವದೆಹಲಿ: ಉತ್ತರ ದೆಹಲಿಯ ಸದರ್ ಬಜಾರ್ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಆರೋಪಿ ಸುಡಾಮಾ ನಬಿ ಕರೀಮ್ ಪ್ರದೇಶದಲ್ಲಿ ವಾಸಿಸುತ್ತಿದ್ದು, ಸದರ್ ಬಜಾರ್‌ನಲ್ಲಿ ಕೆಲಸ ಮಾಡುತ್ತಿದ್ದ.

ಶುಕ್ರವಾರ ರಾತ್ರಿ ಎಂಟು ವರ್ಷದ ಬಾಲಕಿ ತನ್ನ ಅಜ್ಜಿಯೊಂದಿಗೆ ಮನೆಯ ಹೊರಗೆ ಮಲಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುಡಾಮಾ ನಬಿ, ಬಾಲಕಿಯನ್ನು ಮನೆಯ ಸಮೀಪ ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಹುಡುಗಿಯ ಅಜ್ಜಿ ನಿದ್ರೆಯಿಂದ ಎಚ್ಚರಗೊಂಡಾಗ ಬಾಲಕಿ ಇಲ್ಲದಿರುವುದನ್ನು ಕಂಡು ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ.

ಬಾಲಕಿ ಈ ಘಟನೆಯನ್ನು ಪೊಲೀಸರಿಗೆ ವಿವರಿಸಿದ್ದಾಳೆ. ಬಾಲಕಿಯ ಹೇಳಿಕೆ ಆಧರಿಸಿ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.

ಆರೋಪಿ ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details