ಕೋಯಿಕ್ಕೋಡ್ (ಕೇರಳ):ಕೋಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಒಬ್ಬರಿಗೆ ಕೋವಿಡ್-19 ಸೋಂಕು ಇರುವುದು ಗೊತ್ತಾಗಿದೆ.
ಕೋಯಿಕ್ಕೋಡ್ ವಿಮಾನ ಅಪಘಾತ: ಮೃತಪಟ್ಟವರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢ - ಆರೋಗ್ಯ ಸಚಿವೆ ಕೆ.ಕೆ.ಶೈಲಜಾ
ಕೋಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಒಬ್ಬರಿಗೆ ಕೋವಿಡ್-19 ಇರುವುದು ಗೊತ್ತಾಗಿದೆ.
ಕೋಯಿಕ್ಕೋಡ್ ವಿಮಾನ ಅಪಘಾತ
ವಿಮಾನದಲ್ಲಿ ಪ್ರಯಾಣಿಸಿದ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲ ಸಿಬ್ಬಂದಿಯನ್ನೂ ಕ್ವಾರಂಟೈನ್ಗೆ ಒಳಪಡಿಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲು ಸ್ಥಳಕ್ಕೆ ತಲುಪಿದ್ದಾರೆ. ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.