ನವದೆಹಲಿ:ಮಾಜಿ ಸಚಿವ ಡಿಕೆಶಿ ಅವರ ಅಕೌಂಟಿನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇಡಿ ನೋಟಿಸ್ ಜಾರಿಗೊಳಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ.
ಜಾರಿ ನಿರ್ದೇಶನಾಲಯ ಸಮನ್ಸ್ ಹಿನ್ನೆಲೆ: ಇಡಿ ಕಚೇರಿಗೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್ - ಡಿ.ಕೆ.ಶಿವಕುಮಾರ್
ಡಿಕೆಶಿ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆಗೆ ಹಾಜರಾಗಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್
ಡಿ.ಕೆ.ಶಿವಕುಮಾರ್ ಅಕೌಂಟ್ನಿಂದ ಲಕ್ಷ್ಮಿ ಹೆಬ್ಬಾಳ್ಕರ್ ಖಾತೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.14 ರಂದೇ ಇಡಿ ನೋಟಿಸ್ ಜಾರಿಗೊಳಿಸಿತ್ತು. ವಿಚಾರಣೆಗೆ ಮತ್ತೊಂದು ದಿನ ನೀಡುವಂತೆ ಹೆಬ್ಬಾಳ್ಕರ್ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.
ಈಗಾಗಲೆ ಲಕ್ಷ್ಮಿ ಹೆಬ್ಬಾಳ್ಕರ್ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ್ದು, ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.