ಇಡುಕ್ಕಿ (ಕೇರಳ) : ಜಿಲ್ಲೆಯ ಎಡಮಾಲುಕ್ಕುಡಿ ಬಳಿಯ ಪೆಟ್ಟಿಮುಡಿಯಲ್ಲಿ ಸಂಭವಿಸಿದ ಭೂಕುಸಿತ ಘಟನೆಯಲ್ಲಿ ಮಣ್ಣಿನಡಿ ಸಿಲುಕಿದ್ದ ಏಳು ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಕೇರಳದ ಪೆಟ್ಟಿಮುಡಿಯಲ್ಲಿ ಭೂ ಕುಸಿತ : 7 ಮೃತ ದೇಹಗಳು ಪತ್ತೆ - ಪೆಟ್ಟಿಮುಡಿಯಲ್ಲಿ ಭೂ ಕುಸಿತ ನಾಲ್ವರು ಸಾವು
ಕೇರಳದ ಇಡುಕ್ಕಿ ಜಿಲ್ಲೆಯ ಪೆಟ್ಟಿಮುಡಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಮಣ್ಣಿನಡಿ ಸಿಲುಕಿದ್ದ ಏಳು ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.

ನಿನ್ನೆ ರಾತ್ರಿ ಭೂಕುಸಿತ ಸಂಭವಿಸಿದೆ. ಸ್ಥಳೀಯ ನಿವಾಸಿಯೊಬ್ಬರು ಮುನ್ನಾರ್ಗೆ ತೆರಳಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೆಟ್ಟಿಮುಡಿ ಬೆಟ್ಟಗಳಿಂದ ಆವೃತವಾದ ಪ್ರದೇಶವಾಗಿದ್ದು, ಸುಮಾರು 80 ಕುಟುಂಬಗಳು ಇಲ್ಲಿ ವಾಸಿಸುತ್ತಿವೆ. ಸದ್ಯ, ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ಎನ್ಡಿಆರ್ಎಫ್ ತಂಡದಿಂದ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಘಟನೆಯಲ್ಲಿ ಸುಮಾರು 20 ಮನೆಗಳು ಮಣ್ಣಿನಡಿ ಸಿಲುಕಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದ, ಸ್ಥಳಕ್ಕೆ ಭೇಟಿ ನೀಡುವುದಾಗಿ ಸಚಿವ ಎಂಎಂ ಮಣಿ ತಿಳಿಸಿದ್ದಾರೆ.