ನವದೆಹಲಿ:ನಿನ್ನೆ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ನೆರವೇರಲಿದೆ. ಇಂದೂ ಕೂಡ ಹಲವು ಗಣ್ಯರು ಅಗಲಿದ ಕಾಂಗ್ರೆಸ್ ಹಿರಿಯ ನಾಯಕಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಇಂದು ಶೀಲಾ ದೀಕ್ಷಿತ್ ಅಂತ್ಯ ಸಂಸ್ಕಾರ... ಅಂತಿಮ ದರ್ಶನ ಪಡೆದ ಹಿರಿಯ ನಾಯಕರು - undefined
ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತಿಮ ವಿಧಿ ವಿಧಾನವು ಇಂದು ಮಧ್ಯಾಹ್ನ ನಡೆಯಲಿದೆ.
ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ಅನಾರೋಗ್ಯದಿಂದ ನಿನ್ನೆ ಕೊನೆಯುಸಿರೆಳೆದಿದ್ದರು. 81 ವರ್ಷ ವಯಸ್ಸಿನ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ನಿನ್ನೆ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತಿಮ ದರ್ಶನ ಪಡೆದರು.
ಇನ್ನು ದೆಹಲಿಯ ನಿಜಾಮುದ್ದಿನ್ ಪ್ರದೇಶದಲ್ಲಿನ ಶೀಲಾ ದೀಕ್ಷಿತ್ ನಿವಾಸದಲ್ಲಿ ಅವರ ಅಂತಿಮ ದರ್ಶನದ ಬಳಿಕ ಕಾಂಗ್ರೆಸ್ ಪಾರ್ಥಿವ ಶರೀರವನ್ನು ಕಾಂಗ್ರೆಸ್ ಕಚೇರಿಗೆ ಒಯ್ಯಲಾಗಿದೆ. ಮಧ್ಯಾಹ್ನ 2.30ರ ವೇಳೆಗೆ ನಿಗಮ್ ಬೊಧ್ ಘಾಟ್ನಲ್ಲಿ ಅಂತ್ಯ ಸಂಸ್ಕಾರ ಕಾರ್ಯ ನಡೆಯಲಿದೆ.